ಕರ್ನಾಟಕ

ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ; ಮೊಬೈಲ್ ವಶ!

Pinterest LinkedIn Tumblr

ಬೆಂಗಳೂರು: ಸರ್ಚ್ ವಾರೆಂಟ್ ಜೊತೆಗೆ ಬೆಂಗಳೂರಿನ ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ (ಅಪಾರ್ಟ್ ಮೆಂಟ್) ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ರಾಗಿಣಿ ಮನೆಯಲ್ಲಿಯೇ ಇದ್ದು, ಸಿಸಿಬಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಎನ್ನುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮನೆ ತಪಾಸಣೆ ಮಾಡುತ್ತಿದ್ದಾರೆ. ನಟಿ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ.

Comments are closed.