
ಬೆಂಗಳೂರು: ರಾಜ್ಯದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಟ್ವಿಟರ್ ನಲ್ಲಿ ಈ ವಿಷಯವನ್ನು ತಿಳಿಸಿರುವ ಸಚಿವರು, ಇಂದು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಬಂದಿದೆ. ಯಾವುದೇ ಹೆಚ್ಚಿನ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಶಿವರಾಮ್ ಹೆಬ್ಬಾರ್ ಹೆಬ್ಬಾರ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Comments are closed.