ಉಡುಪಿ: ಆಂಧ್ರ ಪ್ರದೇಶ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ದಲಿತ ಯುವಕನ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರ ನಿರ್ಮಾಪಕ, ತೆಲುಗು ಬಿಗ್ ಬಾಸ್ ಮೊದಲ ಆವೃತ್ತಿಯ ಸ್ಪರ್ಧಿ ನೂತನ್ ನಾಯ್ಡು ಎಂಬಾತನನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ, ವಿಶಾಖಪಟ್ಟಣ ಪೊಲೀಸರಿಂದ ಶನಿವಾರ ಬೆಳಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ನೂತನ್ ನಾಯ್ಡು ಮಂಗಳೂರಿನಿಂದ ಮುಂಬೈಗೆ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಉಡುಪಿ ಮತ್ತು ಮಣಿಪಾಲ ಠಾಣೆ ಪಿಎಸ್ಐ ನೇತೃತ್ವದ ತಂಡದ ಪೊಲೀಸರು ಆರೋಪಿಯನ್ನು ಸುತ್ತುವರಿದಾಗ ತನ್ನ ಬಳಿಯಿದ್ದ ಒಂದು ಮೊಬೈಲನ್ನು ಎಸೆಯಲು ಮುಂದಾಗಿದ್ದಾನೆ. ಆರೋಪಿ ನೂತನ್ ಬಳಿಯಿಂದ ನಾಲ್ಕು ಮೊಬೈಲ್ ಫೋನ್ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ವಿಶಾಖಪಟ್ಟಣ ಪೊಲೀಸರು ಆರೋಪಿಯನ್ನು ಉಡುಪಿ ನ್ಯಾಯಲಯಕ್ಕೆ ಹಾಜರುಪಡಿಸಿ ವಿಶಾಖಪಟ್ಟಣಕ್ಕೆ ಕರೆದೊಯ್ದಿದ್ದಾರೆ.
Comments are closed.