ಕರ್ನಾಟಕ

ರಾಜಕೀಯ ರಂಗ, ರಾಜಕಾರಣಿಗಳ ಮಕ್ಕಳು, ಚಿತ್ರನಟರು ಯಾರೇ ಈ ಡ್ರಗ್ಸ್ ಮಾಫಿಯಾದಲ್ಲಿರಲಿ ಅವರ ವಿರುದ್ಧ ಕ್ರಮ: ಸಚಿವ ಶ್ರೀರಾಮುಲು

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿನ ಡ್ರಗ್ಸ್ ಮಾಫಿಯಾದ ಬಗ್ಗೆ ಆರಯೋಗ್ಯ ಸಚಿವ ಶ್ರೀರಾಮುಲು ಮಾತನಾಡಿದ್ದಾರೆ. ಅವರ ಏನು ಹೇಳಿದ್ದಾರೆ ನೋಡಿ…

ಡ್ರಗ್ಸ್ ವಿಚಾರ ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ರಾಜಕೀಯ ರಂಗ, ರಾಜಕಾರಣಿಗಳ ಮಕ್ಕಳು, ಚಿತ್ರನಟರು ಯಾರೇ ಈ ಡ್ರಗ್ಸ್ ಮಾಫಿಯಾದಲ್ಲಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಮಾಫಿಯಾದಿಂದ ಯುವ ಜನತೆಯನ್ನು ಕಾಪಾಡಬೇಕಿದೆ. ನಮ್ಮ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ನಿನ್ನೆಯಿಂದಲೇ ಮೇಟ್ರೋ ರೈಲು ಸಂಚಾರ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಮೇಟ್ರೋ ಕೋವಿಡ್ ವಿಚಾರವಾಗಿ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ವಿಧಾನಸೌಧದ ಡಾ. ಬಿ ಆರ್ ಅಂಬೇಡ್ಕರ್ ಮೇಟ್ರೋ ರೈಲು ನಿಲ್ದಾಣಕ್ಕೆ ರಾಮುಲು ಭೇಟಿ ನೀಡಿದ ವೇಳೆ ಹೀಗೆಂದರು.

ರೈಲಿನಲ್ಲಿ ಪ್ರಯಾಣ ಮಾಡಿ ಪರಿಶೀಲನೆ ಮಾಡಿದರು. ನಿಲ್ದಾಣದಲ್ಲೂ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ರಾಮುಲು ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವ್ರು,ಮೇಟ್ರೋ ಆರಂಭವಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಪ್ರಯಾಣಿಕರು ಆತಂಕಪಡುವ ಅಗತ್ಯ ಇಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೆಟ್ರೋ ರೈಲಿನಲ್ಲಿಯೂ ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗಿದೆ. ಇದರ ಜೊತೆಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ಎಲ್ಲದರ ಬಗ್ಗೆಯೂ ಮುಂಜಾಗ್ರತ ಕ್ರಮಗಳನ್ನು ಮೆಟ್ರೋ ಕೈಗೊಂಡಿದೆ. ಪ್ರಯಾಣಿಕರು ಆತಂಕಪಡದೆ ಪ್ರಯಾಣಿಸಬಹುದು ಎಂದರು.

ನಮ್ಮ ಪ್ರಾಣ ನಮ್ಮ ಕೈಯಲ್ಲಿದೆ. ಹಾಗಾಗಿ, ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು. ಮೆಟ್ರೋದಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಥರ್ಮಲ್ ಸ್ಕ್ಯಾನಿಂಗ್ ಮಾಡಿಸಿಕೊಂಡು ಸ್ಯಾನಿಟೈಸರ್ ಬಳಸಬೇಕು ಎಂದು ಸಲಹೆ ಮಾಡಿದರು.

ಐದು ತಿಂಗಳ ನಂತರ ಮೆಟ್ರೋ ರೈಲು ಆರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಿದ ಸಚಿವರು, ಆರು ಬೋಗಿಗಳಲ್ಲಿ ಸುಮಾರು 400 ಪ್ರಯಾಣಿಕರು ಪ್ರಯಾಣಿಸಬಹುದು ಎಂದರು.

Comments are closed.