ಕರ್ನಾಟಕ

ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗದಿದ್ದಲ್ಲಿ ಜಟಕಾ ಬಂಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ: ವಾಟಾಳ್

Pinterest LinkedIn Tumblr

ಮೈಸೂರು: ಮುಂದಿನ ತಿಂಗಳು ನಡೆಯುವ ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು ಹೊರತು ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಬರದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಮೈಸೂರಿನ ಜಯಚಾಮರಾಜ ವೃತ್ತದಲ್ಲಿ ರಾಜ್ಯ ಸರ್ಕಾರದ ಸರಳ ದಸರಾ ಆಚರಣೆ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ಅವರು, ಕೊರೋನಾ ಸೋಂಕು ನಿಯಂತ್ರಣ ಕ್ರಮಗಳ ನಡುವೆಯು ದಸರಾ ವೈಭವಕ್ಕೆ ಯಾವುದೇ ತೊಂದರೆ ಎದುರಾಗಬಾರದು. ನಾಡಹಬ್ಬ ದಸರಾವನ್ನು ಅದ್ದೂರಿಯಾಗಿಯೇ ಮಾಡಬಹುದು. ಸರಳ ದಸರಾ ಮಾಡಲು 15 ಕೋಟಿ ರೂ ಏಕೆ ಬೇಕು ಎಂದು ಪ್ರಶ್ನಿಸಿದ ಅವರು ಸ್ಥಳೀಯ ಕಲಾವಿದವರ ಮೂಲಕ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಸರ್ಕಾರ ದಸರಾ ವೈಭವಕ್ಕೆ ಯಾವುದೇ ಕೊರತೆ ಮಾಡಬಾರದು ಎಂದು ಹೇಳಿದರು.

Comments are closed.