ಕರ್ನಾಟಕ

ರಾಜ್ಯದಲ್ಲಿ ಇಂದು (ಮಂಗಳವಾರ) 7,576 ಕೊರೋನಾ ಪ್ರಕರಣಗಳು ಪತ್ತೆ!: 97 ಮಂದಿ ಬಲಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಇಂದು (ಮಂಗಳವಾರ) 7,576 ಮಂದಿ ಕೊರೋನಾಗೆ ತುತ್ತಾಗಿದ್ದರೆ 97 ಮಂದಿ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 97 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,084 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,76,712ಕ್ಕೆ ಏರಿಕೆಯಾಗಿದೆ.

Comments are closed.