ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಆಗಮಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಮೋದಿಯವರನ್ನು ಭೇಟಿಯಾಗಲಿದ್ದಾರೆ ಬಿ.ಎಸ್.ವೈ.
(File Photo)
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಲು ಯಡಿಯೂರಪ್ಪ ದೆಹಲಿ ತೆರಳಿದ್ದಾರೆ. ದೆಹಲಿಗೆ ಬಂದಿಳಿದ ಬಿ.ಎಸ್.ವೈ ಸುದ್ದಿಗಾರರೊಂದಿಗೆ ಮಾತಾಡಿದ್ದು, ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುತ್ತೇನೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ರಾಜ್ಯದ ಅಭಿವೃದ್ದಿ ಸೇರಿದಂತೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡ ಹೈಕಮಾಂಡ್ ಜತೆ ಚರ್ಚಿಸುತ್ತೇನೆ. ಹೈಕಮಾಂಡ್ ಭೇಟಿ ಮಾಡಿದ ಬಳಿಕ ಯಾವಾಗ ಸಂಪುಟ ವಿಸ್ತರಣೆ ಎನ್ನುವ ಬಗ್ಗೆ ಗೊತ್ತಾಗಲಿದೆ ಎಂದರು.
Comments are closed.