
ಬೆಂಗಳೂರು: ಕೊರೋನಾ ಮಹಾಮಾರಿ ಯಾರನ್ನು ಬಿಡದೆ ಕಾಡುತ್ತಿದ್ದು, ಇದೀಗ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಅವರು ಕರ್ನಾಟಕದಾದ್ಯಂತ ತಿರುಗಾಟ ನಡೆಸುತ್ತಿರುವ ಮಧ್ಯೆ ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢವಾಗಿದೆ.
ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ್ ಮುತಾಲಿಕ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನು ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು.
ಸತತ ಪ್ರಯಾಣದಿಂದ ಜ್ವರ ಬಂದಿದೆ ಎನ್ನಲಾಗಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾದಾಗ ಸೋಂಕಿರುವುದು ಪತ್ತೆಯಾಗಿದೆ.
Comments are closed.