ಕರ್ನಾಟಕ

ರಾಜ್ಯದಲ್ಲಿ ಇಂದು (ಶನಿವಾರ) 8364 ಕೊರೋನಾ ಪ್ರಕರಣಗಳು ಪತ್ತೆ: 114 ಮಂದಿ ಬಲಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಇಂದು (ಶನಿವಾರ) 8364 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. 114 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 7922ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 33 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 114 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ 3733 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,91,438ಕ್ಕೆ ಏರಿಕೆಯಾಗಿದೆ. ಇಂದು 10815 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,04841ಕ್ಕೆ ಏರಿಕೆಯಾಗಿದೆ.

Comments are closed.