
ನವದೆಹಲಿ: ಶುಕ್ರವಾರ ಪ್ರಧಾನಿ ನೇರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ಸುಳಿವು ನೀಡಿದ್ದಾರೆ.
ಮುಂದಿನ ಸೋಮವಾರ ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಅವರು ತಿಳಿಸಿದರು.
“ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಎಂಬುದನ್ನು ಹಾಗೂ ಎಷ್ಟು ಜನರನ್ನು ತುಂಬಿಕೊಳ್ಳಬೇಕು ಎಂಬದನ್ನು ಹೈಕಮಾಂಡ್ ನಿರ್ಧರಿಸಲಿದೆ. ದೆಹಲಿ ನಾಯಕರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ,” ಎಂದು ಹೇಳಿದರು.
“ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ,” ಎಂದು ಹೇಳಿದರು.
Comments are closed.