ಬೆಂಗಳೂರು: ಬಂಗಾಲ ಉಪಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನಾಳೆಯೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಸೆ.20ರಿಂದ 23ರ ವರೆಗೆ ವ್ಯಾಪಕ ಮಳೆಯಾಗಲಿದೆ. ಇನ್ನೂ ಮೂರು ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆ ಬರುವ ಸಾಧ್ಯತೆಯಿದೆ. ಈ ಭಾಗದ ಹಲವೆಡೆ 20 ಸೆಂಟಿ ಮೀಟರ್ಗಿಂತಲೂ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ 22ರವರೆಗೆ ವ್ಯಾಪಕ ಮಳೆಯಾಗಲಿದ್ದು, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆ.21ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಸೆ. 22-23 ರಾಜ್ಯದ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಸೆಪ್ಟೆಂಬರ್ 26ರಂದು ಆರೆಂಜ್ ಅಲರ್ಟ್ ಮಾಡಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಉತ್ತಮ ಮಳೆಯಾಗಲಿದೆ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿಕೆ ತಿಳಿಸಿದ್ದಾರೆ.
Comments are closed.