ಕರ್ನಾಟಕ

ಕೊರೋನಾದಿಂದ ಗುಣಮುಖರಾದವರ ದೂರಗಾಮಿ ಆರೋಗ್ಯ ಪರಿಣಾಮದ ಅಧ್ಯಯನ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

Pinterest LinkedIn Tumblr


ಬೆಂಗಳೂರು: ಕೊರೋನಾದಿಂದ ಗುಣಮುಖರಾದವರ ದೂರಗಾಮಿ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ಣಯಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋಂಕಿನಿಂದ ಗುಣಮುಖರಾದವರ ಆರೋಗ್ಯ ಸ್ಥಿತಿಗತಿಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲಾಗುವುದು. ಲಘು ಮತ್ತು ತೀವ್ರ ರೋಗ ಲಕ್ಷಣ ಹೊಂದಿದ್ದವರಿಗೆ ಮುಂಬರುವ ದಿನಗಳಲ್ಲಿ ಕಂಡು ಬರಬಹುದಾದ ಆರೋಗ್ಯ ಸಮಸ್ಯೆಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆ ಹೊಂದಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲಾಗುವುದು. ಈ ಕುರಿತ ವರದಿ ಆಧಾರದ ಮೇಲೆ ಕೋವಿಡ್-೧೯ ಸೋಂಕಿತರ ದೂರಗಾಮಿ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೂತನ ಚಿಕಿತ್ಸಾ ಪದ್ದತಿಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

Comments are closed.