ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು ನಟಿಮಣಿಯರಿಗೆ ಜೈಲಾ ಅಥವಾ ಬೇಲಾ ಇಂದು ನಿಕ್ಕಿಯಾಗಲಿದೆ.

ಎರಡು ದಿನಗಳ ಹಿಂದೆ 33ನೇ ಸೆಶನ್ಸ್ ನ್ಯಾಯಾಲಯವು ಇಬ್ಬರು ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಆದೇಶ ನೀಡಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ಕೇಳಿದ್ದ ಹಿನ್ನೆಲೆ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ ಮುಂದೂಡಿದ್ದರಿಂದ ನಟಿಯರು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
Comments are closed.