ಕರ್ನಾಟಕ

ರಾಜ್ಯದಲ್ಲಿ ಇಂದು (ಸೋಮವಾರ) 7,339 ಕೊರೋನಾ ಪ್ರಕರಣಗಳು ಪತ್ತೆ: 122 ಮಂದಿ ಬಲಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) 7,339 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 122 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 122 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 32 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 122 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲಾಖೆ ಹೇಳಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,886 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,97,646ಕ್ಕೆ ಏರಿಕೆಯಾಗಿದೆ.

ಇಂದು 9,925 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,23,377ಕ್ಕೆ ಏರಿಕೆಯಾಗಿದೆ. 95,335 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.