ಕರ್ನಾಟಕ

3 ದಿನದಲ್ಲಿ ಅಧಿವೇಶನ ಅಂತಿಮಗೊಳಿಸಲು ಪ್ರಯತ್ನಿಸುತ್ತೇವೆ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಮೂರು ದಿನದಲ್ಲಿ ಅಧಿವೇಶನ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ ಶಾಸಕರೊಂದಿಗೆ, ಸಚಿವರೊಂದಿಗೆ ಮಾತನಾಡಿದ್ದು, ಮೂರು ದಿನಗಳಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ನಿರ್ಧರಿಸಿದ್ದೇವೆ. ಸಾಕಷ್ಟು ಶಾಸಕರು ಈಗಾಗಲೇ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಸುಮಾರು 50 ರಿಂದ 60 ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಅಂತೆಯೇ ಸದನಕ್ಕೆ ಹಾಜರಾಗುವ ಶಾಸಕರೇ ಚರ್ಚೆ ನಡೆಸಲಿದ್ದಾರೆ. ನಾವು ಮೂರು ದಿನದಲ್ಲೇ ಸದನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಹೇಳಿದರು.

ಕಳೆದ 10 ದಿನಗಳಲ್ಲಿ 6 ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಇದಲ್ಲದೆ ಕೆಲ ಶಾಸಕರು, ಮೇಲ್ಮನೆ ಸದಸ್ಯರೂ ಕೂಡ ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತೆ ಹಲವು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.