ಕಲಬುರಗಿ: ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ ಸೆ.23ರಂದು ವರ್ಚುವಲ್ ಮಾದರಿಯಲಿ ನಡೆಯಲಿದೆ.


ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಜಾನಪದ ಲೇಖಕ ಮತ್ತು ಬರಹಗಾರ ಎಂ.ಜಿ.ಬಿರಾದಾರ್, ಕವಿ ಚನ್ನವೀರ ಕಣವಿ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. 38 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 25 ವಿದ್ಯಾರ್ಥಿಗಳಿಗೆ ಪಿಎಚ್ಡಿ, 665 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.
Comments are closed.