ಕರ್ನಾಟಕ

ಕೆಪಿಸಿಸಿ ವಕ್ತಾರೆಯಾಗಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇಮಕ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾಗಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಬಹುಮುಖ್ಯವಾದ ಪಾತ್ರವನ್ನು ವಹಿಸುವುದು ಎಲರಿಗೂ ತಿಳಿದಿರುವ ವಿಷಯವಾಗಿದ್ದು ಮಾಧ್ಯಮವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೆ ಸ್ಥಂಬವೆಂದು ಪರಿಗಣಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ದ್ರಶ್ಯ, ಮುದ್ರಣ ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯಗಲ ಬಗ್ಗೆ ಚರ್ಚೆಯ ನೇತ್ರತ್ವ ವಹಿಸುತ್ತಿರುವುದು ಗಮನಿಸಬೇಕಾದ ವಿಚಾರವಾಗಿದೆ. ಈ ಮಾಧ್ಯಮಗಳಲ್ಲಿ ನಮ್ಮ (ಕಾಂಗ್ರೆಸ್) ವಿಚಾರ ಮತ್ತು ದ್ರಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ‘ಕೆಪಿಸಿಸಿ ವಕ್ತಾರ’ರನ್ನಾಗಿ ನೇಮಿಸಲಾಗಿದೆ. ಈ ಜವಬ್ದಾರಿಯನ್ನು ತಾವು ವಹಿಸಿಕೊಂಡು ಕೆಪಿಸಿಸಿ ಸಂವಹನ, ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ ಸೂಚನೆ ಮಾರ್ಗದರ್ಶನಗಳ ಮೇಲೆ ತಕ್ಷಣ ಕಾರ್ಯಪ್ರವ್ರತ್ತರಾಗಬೇಕು ಎಂದು ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

Comments are closed.