ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ?- ಪ್ರಧಾನಿ ಸಭೆ ಬಗ್ಗೆ ಸಚಿವ ಡಾ. ಕೆ ಸುಧಾಕರ್ ಹೇಳಿದ್ದೇನು?

Pinterest LinkedIn Tumblr

ಬೆಂಗಳೂರು: ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಪ್ರಸ್ತಾಪವಾಗಿಲ್ಲ. ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಸಚಿವರು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ಚರ್ಚೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆಯಿಲ್ಲ ಎಂದರು.

ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವಲ್ಲಿ ಪ್ರಯತ್ನಿಸಿ, ಮಾಸ್ಕ್ ಧರಿಸುವಿಕೆ ಅಗತ್ಯವಾಗಿರಲಿ ಎಂದು ಪ್ರಧಾನಿ ಮೋದಿ ಅವರು ವೀಡಿಯೋ ಕಾನ್ಫರೆನ್ಸ್‌ ನಲ್ಲಿ ಏಳು ರಾಜ್ಯಗಳ ಸಿಎಂಗಳಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆದಷ್ಟು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲು ಅವರು ಸಿಎಂಗಳಿಗೆ ಸೂಚನೆ ನೀಡಿದ್ದಾರೆ.

(ಸಾಂದರ್ಭಿಕ ಚಿತ್ರಗಳು)

Comments are closed.