ಕರ್ನಾಟಕ

ಸ್ಯಾಂಡಲ್​​ವುಡ್​​ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಮತ್ತೆ ಜೈಲೇ ಗತಿ..!

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು ವಾದ-ಪ್ರತಿವಾದ ಆಲಿಸಿದ ಎನ್​ಡಿಪಿಎಸ್ ನ್ಯಾಯಾಲಯ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಪ್ರಕಟಿಸಿದೆ.

ಎನ್.ಡಿ.ಪಿ.ಎಸ್. ವಿಶೇಷ ಕೋರ್ಟ್ ನ್ಯಾಯಮೂರ್ತಿಗಳಾದ ಜಿ.ಎಂ ಶೀನಪ್ಪನವರು ಈ ಆದೇಶ ಹೊರಡಿಸಿದ್ದಾರೆ. ಸಿಸಿಬಿ ತನಿಖೆ ಇನ್ನು ಪ್ರಾಥಮಿಕ ಹಂತದಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ಧಾರೆ. ರಾಗಿಣಿ ಮತ್ತು ಸಂಜನಾ ಜೊತೆಗೆ ರಾಹುಲ್ ಥಾನ್ಸೆ, ವಿರೇಂದ್ರ ಖನ್ನಾ, ರವಿಶಂಕರ್ ಕೂಡ ಜಾಮೀನು ಕೋರಿ ಕೋರ್ಟ್​ ಮೊರೆ ಮೆಟ್ಟಿಲೇರಿದ್ದರು. ಎಲ್ಲರ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಹಾಗೆಯೇ ಇದುವರೆಗೂ ತಲೆಮರೆಸಿಕೊಂಡಿರುವ ಪ್ರಕರಣದ ಪ್ರಥಮ ಆರೋಪಿ ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಅದನ್ನು ಕೂಡ ವಜಾಗೊಳಿಸಲಾಯಿತು. ಅಲ್ಲದೇ ಇನ್ನೋರ್ವ ಆರೋಪಿ ವಿನಯ್ ಕುಮಾರ್ ಜಾಮೀನು ಅರ್ಜಿಯೂ ವಜಾಗೊಂಡಿದೆ.

Comments are closed.