ಬೆಂಗಳೂರು: ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾಗಿದ್ದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿರುವ ಮಾಧುಸ್ವಾಮಿಯವರ ಕಾರು ಚಾಲಕ ಹಾಗೂ ಕೆಲಸದಾಳುವಿಗೆ ಕೊರೋನಾ ಕಾಣಿಸಿಕೊಂಡಿದ್ದು ಈ ಕಾರಣಕ್ಕೆ ಪರೀಕ್ಷೆ ಮಾಡಿಸಿದ್ದರು. ಅದರ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.
ಕಳೆದ ವಾರವಷ್ಟೇ ವಿಧಾನಮಂಡಲ ಅಧಿವೇಶನದಲ್ಲಿ ಮಾಧುಸ್ವಾಮಿಯವರು ಡಿ.ಕೆ. ಶಿವಕುಮಾರ್ ಅವರಿಗೆ ಒಂದಷ್ಟು ವಿಚಾರದಲ್ಲಿ ಟಾಂಗ್ ಕೊಟ್ಟಿದ್ದು ಬಹಳಷ್ಟು ವೈರಲ್ ಆಗಿತ್ತು.