ಕರ್ನಾಟಕ

ಶಾಲೆ-ಕಾಲೇಜು ಪ್ರಾರಂಭದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು ಶೀಘ್ರವೇ ಶಾಲೆ-ಕಾಲೇಜು ಆರಂಭವಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿದೆ.

ಸ್ಪಷ್ಟನೆ ನೀಡಿದ ಸಚಿವರು, ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ. ತಾನು ಸದ್ಯ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ.

ಕೊರೋನಾ ಸೋಂಕು ಹೆಚ್ಚು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲಾ-ಕಾಲೇಜು ತೆರೆಯುವುದು ಸೂಕ್ತ ಅಲ್ಲ ಎಂದು ಬಹುತೇಕ ಪೋಷಕರು ಶಿಕ್ಷಣ ತಜ್ನರು ಅಭಿಪ್ರಾಯ ಪಟ್ಟಿದ್ದರು.

Comments are closed.