ಕರ್ನಾಟಕ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ; ಸರಣಿ ಟ್ವೀಟ್​’ನಲ್ಲಿ ಹೇಳಿದ್ದೇನು…?

Pinterest LinkedIn Tumblr

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕೋರಿದ್ದಾರೆ.

ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಅನ್ನ, ಆಶ್ರಯ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಟೀಕೆ ಸಲ್ಲದು. ಬೆಂಗಳೂರು ಉಗ್ರರದ್ದಲ್ಲ, ನಮ್ಮ ಊರು ಬೆಂಗಳೂರು’ ಎಂದು ತಮ್ಮ ಸರಣಿ ಟ್ವೀಟ್​ಗಳಲ್ಲಿ ಹೇಳಿದ್ದಾರೆ. ಹಾಗೆಯೇ, ಬೆಂಗಳೂರಿನ ಅಭಿವೃದ್ಧಿ ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವಾಗಿರಬಹುದು ಎಂದು ಕುಮಾರಸ್ವಾಮಿ ಶಂಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಟೀಕಿಸಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು. ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದು ತಿಳಿಸಿದ್ದಾರೆ.

‘ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Comments are closed.