ಕರ್ನಾಟಕ

ಕೊಡಗಿನ ಕಾಫಿ ತೋಟವೊಂದರಲ್ಲಿ ಆತ ಬೆಳೆದಿದ್ದೇನು ಗೊತ್ತಾ?

Pinterest LinkedIn Tumblr

ಕೊಡಗು: ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಪ್ರಕರಣವನ್ನು ಕುಶಾಲನಗರ ವೃತ್ತ ನಿರೀಕ್ಷಕರ ತಂಡ ಪತ್ತೆ ಮಾಡಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

(ಸಾಂದರ್ಭಿಕ ಚಿತ್ರ)

ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದ ಸುಬ್ರಮಣಿ ಎಂಬುವವರು ಅವರ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಸಿದ್ದ ಪ್ರಕರಣವನ್ನು ಕುಶಾಲನಗರ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಆರೋಪಿಯನ್ನು ದಸ್ತಗಿರಿ ಮಾಡಿ ಗಾಂಜಾ ಗಿಡ ವಶಪಡಿಸಿಕೊಂಡಿದ್ದು, ಈ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಸೋಮವಾರಪೇಟೆ ಉಪ ವಿಭಾಗದ ಉಪ ಅಧೀಕ್ಷಕರಾದ ಹೆಚ್ಎಂ ಶೈಲೇಂದ್ರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕರಾದ ಎಂ. ಮಹೇಶ್ ಅವರ ನೇತೃತ್ವದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾ ಉಪನಿರೀಕ್ಷಕ ರಾದ ವೆಂಕಟರಮಣ, ಸಿಬ್ಬಂದಿಗಳಾದ ಗಣಪತಿ, ಸಜಿ, ದಯಾನಂದ, ಪ್ರಕಾಶ, ಸಂದೇಶ, ಖಾದರ್, ಪುನೀತ್, ಅರುಣ, ಜೈಶಂಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುವಿಕೆ, ಸಾಗಾಟ ಮತ್ತು ಮಾರಾಟ, ಮಾದಕ ವಸ್ತುಗಳ ಸಾಗಣಿಕೆ ಮತ್ತು ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ನಂಬರ್ 100 ಕ್ಕೆ ದೂರವಾಣಿ ಕರೆ ಮಾಡಿ ಗುಪ್ತವಾಗಿ ಮಾಹಿತಿಯನ್ನು ನೀಡಿ ಮಾದಕ ವಸ್ತುಗಳ ಉತ್ಪಾದನೆ, ಸಾಗಾಣಿಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಸಹಕರಿಸುವಂತೆ ಕೋರಲಾಗಿದೆ.

Comments are closed.