ಕರ್ನಾಟಕ

ರಾಜ್ಯದಲ್ಲಿ ಇಂದು (ಗುರುವಾರ) 10,070 ಕೊರೋನಾ ಪ್ರಕರಣಗಳು ಪತ್ತೆ: 130 ಸಾವು

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಇಂದು (ಗುರುವಾರ) ದಾಖಲೆಯ 10,070 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 130 ಸಾವು ಸಂಭವಿಸಿವೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,994ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,853 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,37,516ಕ್ಕೆ ಏರಿಕೆಯಾಗಿದೆ.

ಇಂದು 7,144 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,92,412ಕ್ಕೆ ಏರಿಕೆಯಾಗಿದೆ. 1,10,412 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.