ಕರ್ನಾಟಕ

ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ

Pinterest LinkedIn Tumblr

ಬೆಂಗಳೂರು: ಸದ್ಯವೇ ಬರುವ ಶಿರಾ ಮತ್ತು ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್​.ಆರ್​. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್​ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಅವರ ಹೇಳಿಕೆಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

Comments are closed.