
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಆತ್ಮೀಯರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
Comments are closed.