ಕರ್ನಾಟಕ

ಶಿಕ್ಷಣ ಸಚಿವ ಸುರೇಶ್ ಕುಮಾರ್​​ಗೆ ಕೊರೋನಾ..!

Pinterest LinkedIn Tumblr


ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್​​ ಸುರೇಶ್ ಕುಮಾರ್​ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಸಚಿವರು ಟ್ವೀಟ್ ಮಾಡುವ ಮೂಲಕ ತಮಗೆ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ 19 ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್​ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ಮೊದಲಿಗೆ ದೇವಾಲಯಕ್ಕ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ನಂತರ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಅರಣ್ಯ ಗ್ರಾಮಗಳಾದ ಮೆದಗನಣೆ, ಇಂಡಿಗನತ್ತ, ತುಳಸಿಕೆರೆ ಗ್ರಾಮಗಳಿಗೆ ದುರ್ಗಮ ಅರಣ್ಯದ ನಡುವೆ ಜೀಪ್ ನಲ್ಲಿ ತೆರಳಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆ ನಡೆಸಿದ್ದರು.

ನಂತರ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ದಸರಾ, ದೀಪಾವಳಿ ಹಾಗು ಕಾರ್ತಿಕ ಮಹೋತ್ಸವ ಜಾತ್ರೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದರು.

Comments are closed.