ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋದರ ಸಂಸದ ಡಿಕೆ ಸುರೇಶ್ ಗೆ ಕೊರೋನಾ

Pinterest LinkedIn Tumblr


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋದರ ಸಂಸದ ಡಿಕೆ ಸುರೇಶ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ತಮಗೆ ಕೊರೋನಾ ಸೋಂಕು ದೃಢವಾಗಿರುವ ಬಗ್ಗೆ ಸಂಸದ ಡಿಕೆ ಸುರೇಶ್ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ.

“ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸೋಮವಾರ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆದಿತ್ತು. ಆ ವೇಳೆ ನೂರಾರು ಬೆಂಬಲಿಗರು ಸುರೇಶ್ ಅವರ ನಿವಾಸದ ಮುಂದೆ ಜಮಾಯಿಸಿದ್ದರು. ಹಾಗಾಗಿ ಹೆಚ್ಚು ಜನರನ್ನು ಭೇಟಿಯಾದ ಕಾರನ ಸಂಸದರು ಸ್ವಯಂಪ್ರೇರಿತರಾಗಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು.

Comments are closed.