ಕರ್ನಾಟಕ

ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಗೆ ಕೊರೋನಾ ಸೋಂಕು

Pinterest LinkedIn Tumblr


ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೋನಾ ಸೋಂಕು ತಗಲಿರುವ ಕುರಿತು ದಿವಂಗತ ಸತ್ಯಾನಾರಾಯಣ್ ಪುತ್ರ ಸತ್ಯಪ್ರಕಾಶ್ ತಿಳಿಸಿದ್ದಾರೆ.

ಕಳೆದ ಮೂರು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಭ್ಯರ್ಥಿ ಅಮ್ಮಾಜಮ್ಮ, ನಿನ್ನೆ ಕೊರೋನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದರು. ಇದೀಗ ಅವರ ವರದಿ ಬಂದಿದ್ದು, ಕೊರೋನಾ ಸೋಂಕು ಇರುವುದು ಧೃಡವಾಗಿದೆ. ಹೀಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ಉಪಚುನಾವಣೆ ಕ್ಷೇತ್ರ ರಂಗೇರುತ್ತಿದ್ದು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿ ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಹೆಂಡತಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಿದೆ. ನವೆಂಬರ್ 3 ರಂದು ತುಮಕೂರಿನ ಶಿರಾ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೆಗೌಡ ಅವರು ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.

ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನ ಈಗಾಗಲೇ ಫೈನಲ್ ಮಾಡಿದೆ.

ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಹೆಂಡತಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ಮೂಲಕ ಗೆಲುವಿನ ಲೆಕ್ಕಾಚಾರವನ್ನು ಮಾಡಿದೆ. ಈ ಮೊದಲು ಸತ್ಯನಾರಾಯಣ್ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು.

ಕಳೆದ ಚುನಾವಣೆಯಲ್ಲಿ ಗೆಲುವು ಪಡೆದಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆದಿದ್ದರೇ, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಇತ್ತ ಶಿರಾ ಕ್ಷೇತ್ರದೊಂದಿಗೆ ಆರ್.ಆರ್ ನಗರ ಉಪಚುನಾವಣೆಯೂ ನವೆಂಬರ್​ 3 ರಂದು ನಡೆಯಲಿದ್ದು, ಜೆಡಿಎಸ್ ಪಕ್ಷ ಇನ್ನಷ್ಟೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ.

Comments are closed.