ಕರ್ನಾಟಕ

ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅತ್ತಿಗೆ ಮೇಘನಾ ರಾಜ್ ಹೇಳಿದ್ದೇನು ಗೊತ್ತಾ?

Pinterest LinkedIn Tumblr

ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಭಾವನಾತ್ಮಕ ಬರವಣಿಗೆ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಮಂಗಳವಾರ ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಅಣ್ಣನ ಅನುಪಸ್ಥಿತಿಯಲ್ಲಿ ಧ್ರುವ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದದು ಧ್ರುವ ಹುಟ್ಟುಹಬ್ಬಕ್ಕೆ ಸಹುಬಹ ಕೋರಿ ಬರೆದಿರುವ ಅತ್ತಿಗೆ ಮೇಘನಾ, ನಿನ್ನ ಅಣ್ಣ ಚಿರುವಿನ ಹಾಗೇ ಸದಾ ನಗುತ್ತಿರು ಎಂದು ವಿಶ್ ಮಾಡಿದ್ದಾರೆ.

ಧ್ರುವ ಹುಟ್ಟುಹಬ್ಬದ ಹಿನ್ನೆಲೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಮೇಘನಾ, ‘ನನ್ನ ಕಷ್ಟದ ಸಮಯದಲ್ಲಿ ನೀನು ಹೇಗೆ ನನ್ನ ಜೊತೆಯಲ್ಲಿ ಗಟ್ಟಿಯಾಗಿ ನಿಂತಿದ್ದೆ ಹಾಗೆಯೇ ನಾನು ಕೂಡ ಶಾಶ್ವತವಾಗಿ ನಿನ್ನ ಪಕ್ಕ ನಿಲ್ಲುತ್ತೇನೆ. ಪ್ರಾಮಿಸ್ ಬರ್ತ್‍ಡೇ ಬಾಯ್. ಸದಾ ನೀನು ಖುಷಿಯಾಗಿರಲು ಆಶೀಸುತ್ತೇನೆ. ನಮ್ಮ ಚಿರು ನಕ್ಕಂತೆ ನೀನು ನಗುತ್ತಿರು. ಹ್ಯಾಪಿಸ್ಟ್ ಬರ್ತ್‍ಡೇ ಬಿಲ್ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

Comments are closed.