ಕರ್ನಾಟಕ

‘ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ’-ಆರೋಗ್ಯ ಸಮಸ್ಯೆ ಕಾರಣಕೊಟ್ಟು ಚಿಕಿತ್ಸೆಗೆ ಅನುಮತಿ ಕೋರಿದ ನಟಿ ರಾಗಿಣಿ

Pinterest LinkedIn Tumblr

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಬೆನ್ನು ನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿದ್ದು ತನಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ನೀಡಿ ಎಂದು ನಗರದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ನಟಿ ರಾಗಿಣಿ, ನನಗೆ ಬೆನ್ನು ನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಿದೆ. ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಗುಣಮಟ್ಟದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ನಟಿ ರಾಗಿಣಿ ಅರ್ಜಿಗೆ ಸಿಸಿಬಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಅರ್ಜಿದಾರರು ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ ಈ ಅರ್ಜಿಯನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಅರ್ಜಿ ವಿಚಾರಣೆಯನ್ನು ಅ.16ಕ್ಕೆ ಮುಂದೂಡಲಾಗಿದೆ.

Comments are closed.