ಕರ್ನಾಟಕ

ಲೇಡಿಸ್ ಬಾರ್ ಮಾಲಿಕ ಮನೀಶ್ ಶೆಟ್ಟಿ ಕೊಲೆ; ನಾಲ್ವರು ಆರೋಪಿಗಳ ಬಂಧನ, ಇಬ್ಬರಿಗೆ ಗುಂಡೇಟು

Pinterest LinkedIn Tumblr

ಬೆಂಗಳೂರು: ಕಳೆದೆರಡು ದಿನದ ಹಿಂದೆ ಸಿಲಿಕಾನ್ ಸಿಟಿಯ ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಶಶಿಕಿರಣ್ ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಅವರು ಗಾಂಧಿನಗರದ ಲಾಡ್ಜ್​ವೊಂದರಲ್ಲಿ ಅಡಗಿದ್ದರೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಅತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ‌ ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ. ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಗುಂಡು ಹೊಡೆದಿದ್ದಾರೆ.

ಆರೋಪಿ ಶಶಿಕಿರಣ್ ಹಾಗೂ ಆರೋಪಿ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅವರಿಬ್ಬರನ್ನು ಸೇಂಟ್ ಫಿಲೋಮಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಬಂಧಿತರಲ್ಲಿ ಶಶಿಕಿರಣ್ ಮತ್ತು ನಿತ್ಯ ಕೊಡಗಿನವರಾದರೆ, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರಾಗಿದ್ದಾರೆ. ಡ್ಯೂಯಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಅ.15ರಂದು ಗುರುವಾರ ರಾತ್ರಿ ‌ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಬಾರ್ ಮುಂದೆ ನಿಂತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

Comments are closed.