ಕರ್ನಾಟಕ

ಶಾಲಾ ಪುನರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್?- ಇಂದಿನಿಂದ ಸರಣಿ ಸಭೆ; ನ.6 ಕ್ಕೆ ಅಂತಿಮ ನಿರ್ಧಾರ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದು, ನ. 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಕೂಡ ಚರ್ಚೆ ನಡೆಸಲಾಗುವುದು ಎಂದು
ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆ ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಇದರೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಬಗ್ಗೆಯೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದರು.

Comments are closed.