ಕರ್ನಾಟಕ

ಕರ್ನಾಟಕ ರಾಜ್ಯದಲ್ಲೂ ಲವ್ ಜಿಹಾದ್ ತಡೆ ಕಾನೂನು ಜಾರಿಗೆ ಚಿಂತನೆ: ಸಚಿವ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸುತ್ತಿದ್ದು, ಬೇರೆ ಬೇರೆ ರಾಜ್ಯಗಳ ನಿರ್ಧಾರಗಳ ಆಧಾರದ ಮೇಲೆ ನಾವು ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಇತ್ತಿಚೆಗೆ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕ ಯುವತಿಯರನ್ನು ದಾರಿತಪ್ಪಿಸುತ್ತಿದೆ. ಲವ್ ಜಿಹಾದ್ ಹೆಸರಿನಿಂದ ಧರ್ಮ ಪರಿವರ್ತನೆ ಸರಿಯಲ್ಲ ಎಂದು ಅಹಮದಾಬಾದ್ ಹೈಕೋರ್ಟ್ ಕೂಡಾ ಹೇಳಿಕೆ ನಿಡಿದ ಬಳಿಕ ದೇಶದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದ್ದು, ಈಗಿರುವ ಕಾನೂನು ಅಲ್ಲದೇ ವಿಶೇಷ ಕಾನೂನು ಆಗಬೇಕೆಂದು ಚರ್ಚೆಗಳಿದ್ದು ಕೆಲವು ರಾಜ್ಯಗಳು ಘೋಷಣೆ ಕೂಡಾ ಮಾಡಿವೆ. ಹಾಗಾಗಿ ಬೇರೆ ರಾಜ್ಯಗಳಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆದು ಎಲ್ಲಾ ಸಲಹೆ ಸೂಚನೆ ಆಧಾರದಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ನಿನ್ನೆ ಟ್ವೀಟ್‌ ಮಾಡಿದ್ದ ಸಿ.ಟಿ ರವಿ ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕವೂ ವಿವಾಹದ ಸಲುವಾಗಿ ಧಾರ್ಮಿಕ ಮತಾಂತರಗೊಳ್ಳುವುದನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ. ಜಿಹಾದಿಗಳು ನಮ್ಮ ಸಹೋದರಿಯರ ಘನತೆಗೆ ಧಕ್ಕೆ ತಂದಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಮತ್ತು ತ್ವರಿತ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

Comments are closed.