ಕರ್ನಾಟಕ

ಹಣಕ್ಕಾಗಿ ಪೊಲೀಸರು ತನ್ನ ತಂದೆಯನ್ನೇ ಕೊಂದರು: ಪೊಲೀಸ್ ಪೇದೆ ಆರೋಪ!

Pinterest LinkedIn Tumblr

ವಿಜಯಪುರ: ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಬಡ ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ. ತಮ್ಮ ತಂದೆ ಹನಮಂತರಾಯ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

`ತಂದೆ ಸಾಯುವ ಮುನ್ನ ಬರೆದ ಡೆತ್‌ ನೋಟ್‌ನಲ್ಲಿ ದೌರ್ಜನ್ಯ ಎಸಗಿದ ಸಿಂದಗಿಯ ಎಂಟು ಜನ ಪೊಲೀಸರ ಹೆಸರುಗಳನ್ನು ಬರೆದಿದ್ದಾರೆ. ದಾಖಲೆ, ಸಾಕ್ಷಿಗಳಿದ್ದರೂ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇದುವರೆಗೂ ಅವರ ವಿರುದ್ಧ ಕ್ರಮಕೈಗೊಂಡಿಲ್ಲ’ ಎಂದು ಆರೋಪಿಸಿದರು.

Comments are closed.