ಕರ್ನಾಟಕ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ

Pinterest LinkedIn Tumblr


ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 94.80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು, ಎರಡು ಪ್ರತ್ಯೇಕ‌ ಪ್ರಕರಣಗಳಲ್ಲಿ 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ‌ತನಿಖೆ ಕೈಗೊಂಡಿದ್ದಾರೆ‌.

ಚಿನ್ನ ಅಕ್ರಮ ಸಾಗಣೆ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಟಲಿಜೆನ್ಸ್ ಅಧಿಕಾರಿಗಳು ಸಹ ಮಾಹಿತಿ ಕಲೆ ಹಾಕುತ್ತಿದ್ದಾರೆ’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.

‘ಎರಡು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ’ ಎಂದು ಅವರು ತಿಳಿಸಿದರು‌.

Comments are closed.