ಕರ್ನಾಟಕ

ವಿಧಾನಸಭೆಯ ಉಪಚುನಾವಣೆ ಜೊತೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

Pinterest LinkedIn Tumblr


ಬೆಂಗಳೂರು: ವಿಧಾನಸಭೆಯ ಉಪಚುನಾವಣೆಯ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‍ವಿ ಸಂಕನೂರು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ವಿಜಯಿ ಆಗಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಪ್ರಾಶಾಸ್ತ್ಯದ ಮತ ಎಣಿಕೆಯಲ್ಲಿ ಯಾರೂ ಗೆಲ್ಲದ ಕಾರಣ, ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಬಿಜೆಪಿಯ ಶಶಿಲ್ ನಮೋಶಿ ಗೆಲುವು ಸಾಧಿಸಿದ್ದಾರೆ. ಇನ್ನು ಆಗ್ನೇಯ ಪದವಿಧರ ಕ್ಷೇತ್ರ ಮತ ಎಣಿಕೆ ನಡೆದಿದ್ದು, ಬಿಜೆಪಿ ಚಿದಾನಂದಗೌಡ ಮುಂದಿದ್ದಾರೆ.

Comments are closed.