ಕರ್ನಾಟಕ

ಮಂತ್ರಾಲಯ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

Pinterest LinkedIn Tumblr

ರಾಯಚೂರು: ರಾಯಚೂರು ಸಮೀಪದ ಮಂಜರ್ಲಾ (ಮಂತ್ರಾಲಯಕ್ಕೆ ತೆರಳುವ ರಸ್ತೆ) ಬಳಿ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಭಿಷೇಕ್, ಗಣೇಶ, ಬಸವರಾಜ ಮೃತರು. ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಇನ್ನೂ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Comments are closed.