ಕರ್ನಾಟಕ

ದೀಪಾವಳಿ ಪ್ರಯುಕ್ತ ರಾಜ್ಯ, ಹೊರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಒಂದು ಸಾವಿರ ಹೆಚ್ಚುವರಿ ಕೆಎಸ್ಆರ್’ಟಿಸಿ ಬಸ್ !

Pinterest LinkedIn Tumblr

ಬೆಂಗಳೂರು: ಈ ಬಾರಿಯೂ ದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್ಆರ್’ಟಿಸಿ ಒಂದು ಸಾವಿರ ಹೆಚ್ಚುವರಿ ಬಸ್ ಹಾಕಿದ್ದು, ಈ ಬಸ್ ನ.13 ಮತ್ತು ನ.14ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ನಡೆಸಲಿದೆ ಎಂದು ಕೆಎಸ್ಆರ್’ಟಿಸಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ.

ಮೈಸೂರು ರಸ್ತೆಯ ಸ್ಯಾಟಲೆಟ್ ಬಸ್ ನಿಲ್ದಾಣದಿಂದ ಮೈಸೂರು, ಹಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಲಿವೆ.

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ನೆರೆಯ ರಾಜ್ಯಗಳ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್’ಗಳು ಸಂಚರಿಸಲಿವೆ. ಅಂತೆಯೇ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಿಸಲಾಗುವುದು. ಹಬ್ಬದ ಬಳಿಕ ನ.16ರಂದು ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಇರಲಿದೆ.

Comments are closed.