ಬೆಂಗಳೂರು: ನಿರ್ಭಯ ಯೋಜನೆಯಡಿಯಲ್ಲಿ ರಾಜ್ಯ ಪೋಲಿಸ್ ಇಲಾಖೆಗೆ 751 ದ್ವಿಚಕ್ರ ವಾಹನಗಳ ಲೋಕಾರ್ಪಣೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದ್ವಿಚಕ್ರ ವಾಹನಗಳನ್ನು
ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಸಿಬ್ಬಂದಿ ನೇಮಕಕ್ಕೆ ಅನಮೋದನೆ ನೀಡಲಾಗುವುದು, FSL ಲ್ಯಾಬ್ ಸಿದ್ದಗೊಂಡಿದ್ದು ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಗೊಳಿಸಲಾಗುವದು, ನಿರ್ಭಯಾ ಯೋಜನೆ ಅಡಿಯಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು, ಪೊಲೀಸ್ ಇಲಾಖೆ ಸುಧಾರಣೆಗೆ ಹಾಗೂ ಸೈಬರ್ ಕ್ರೈಮ್ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.