ಕರ್ನಾಟಕ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಅಶ್ಲೀಲ ಚಿತ್ರ ಅಪ್ ಲೋಡ್

Pinterest LinkedIn Tumblr


ಬೆಂಗಳೂರು: ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಅಪ್‍ ಲೋಡ್ ಮಾಡಲಾಗುತ್ತಿದೆ.

ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿನೋದ್ ರಾಜ್ ಅವರು ಈ ಕುರಿತಾಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದು ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ ಪ್ರಕಟಿಸುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Comments are closed.