ಕರ್ನಾಟಕ

ಆರೋಗ್ಯ ಸಚಿವ ಸುಧಾಕರ್ ಅವರಿಗೆ ಮತ್ತೊಂದು ಜವಬ್ದಾರಿ ನೀಡಿದ ಹೈಕಮಾಂಡ್..!

Pinterest LinkedIn Tumblr

ನವದೆಹಲಿ: ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಇತ್ತೀಚೆಗಷ್ಟೇ ಆರೋಗ್ಯ ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದ ಡಾ.ಕೆ. ಸುಧಾಕರ್ ಅವರಿಗೆ ಕಮಲ ಹೈಕಮಾಂಡ್ ಮತ್ತೊಂದು ಜವಾಬ್ದಾರಿ ನೀಡಿದೆ.

ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆಯ {ಗ್ರೇಟರ್‌ ಹೈದರಾಬಾದ್‌ ಮಹಾನಗರ ಪಾಲಿಕೆ (ಜಿಎಚ್‌ಎಂಸಿ)} ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಬಿಜೆಪಿ ಹೈಕಮಾಂಡ್ ಸಚಿವ ಸುಧಾಕರ್ ಮತ್ತು ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರನ್ನು ಸಹ-ಪ್ರಭಾರಿಗಳಾಗಿ ನೇಮಕ ಮಾಡಿದೆ.

ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ನಿಯೋಜಿಸಿದ್ದಾರೆ. ಅವರೊಂದಿಗೆ ಸಚಿವ ಸುಧಾಕರ್ ಮತ್ತು ಶಾಸಕ ಸತೀಶ್ ರೆಡ್ಡಿ ಅವರನ್ನು ಸಹ-ಪ್ರಭಾರಿಗಳಾಗಿ ನೇಮಕ ಮಾಡಲಾಗಿದೆ.

Comments are closed.