ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಇಂದು (ಮಂಗಳವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದರು. ಶಾಸಕರ ಮನೆಗೆ ಬೆಂಕಿ ಹಚ್ಚಿ ಗಲಭೆ ನಡೆಸಲು ಸಂಪತ್ ರಾಜ್ ದುಷ್ಕರ್ಮಿಗಳಿಗೆ ಪ್ರೇರೇಪಿಸಿದ ಆರೋಪವಿತ್ತು.
ಆರೋಪದ ಹಿನ್ನೆಲೆ ಪೊಲೀಸರು ಸಂಪತ್ ರಾಜನನ್ನು ಬಂಧಿಸಿದ್ದರು. ಕೊರೊನಾ ವೈರಸ್ ಸೋಂಕು ಇರುವ ಕಾರಣ ನೀಡಿ ಆತ ಆಸ್ಪತ್ರೆಗೆ ದಾಖಲಾಗಿದ್ದ. ಮುಂದಿನ ಬೆಳವಣಿಗೆಯಲ್ಲಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಸಂಪತ್ ರಾಜ್‌ಗಾಗಿ ಸಿಸಿಬಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು ಕೊನೆಗೂ ಆತನನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.