ಕರ್ನಾಟಕ

ಪ್ರಧಾನಿ ಮೋದಿಯಿಂದ ನಾಳೆ ಬೆಂಗಳೂರು ಟೆಕ್ ಶೃಂಗಸಭೆ ಉದ್ಘಾಟನೆ

Pinterest LinkedIn Tumblr

ಬೆಂಗಳೂರು: ಮೂರು ದಿನಗಳ ಬೆಂಗಳೂರು ಟೆಕ್ ಶೃಂಗಸಭೆ – 2020 ನಾಳೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ನವೆಂಬರ್ 19 ರಂದು ಬೆಳ್ಳಿಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಬೆಂಗಳೂರು ಟೆಕ್ ಶೃಂಗಸಭೆಯು 2020 ರ ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್ ವೇರ್ ತಂತ್ರಜ್ಞಾನ ಪಾರ್ಕ್ (ಎಸ್‌ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರವು ಈ ಶೃಂಗಸಭೆಯನ್ನು ಆಯೋಜಿಸಿದೆ.

ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಒಕ್ಕೂಟದ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಗಣ್ಯರು ಭಾಗವಹಿಸಲಿದ್ದಾರೆ. ಉದ್ಯಮ ನಾಯಕರು, ತಂತ್ರಜ್ಞರು, ಸಂಶೋಧಕರು, ನಾವೀನ್ಯಕಾರರು, ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಭಾರತ ಮತ್ತು ಜಗತ್ತಿನ ಶಿಕ್ಷಣ ತಜ್ಞರು ಸಹ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Comments are closed.