ಕರ್ನಾಟಕ

ಈಗ ಚಿನ್ನದ ದರದಲ್ಲಿ ಭಾರೀ ಇಳಿಕೆ: ಮುಂದೆ ಮತ್ತೆ ಏರಿಕೆ ಕಾಣಲಿದೆ?-ತಜ್ಞರು

Pinterest LinkedIn Tumblr


ಬೆಂಗಳೂರು: ಕಳೆದ 6 ತಿಂಗಳ ಹಿಂದೆ 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ದರ ಇಂದು 50 ಸಾವಿರ ರೂಪಾಯಿ ಸಮೀಪಿಸಿದೆ. ಕೆಲ ದಿನಗಳಿಂದ ಚಿನ್ನದ ಬೆಲೆ ನಿಧಾನವಾಗಿ ಕಡಿಮೆ ಆಗುತ್ತಾ ಬರುತ್ತಿದೆ.

ಕಳೆದವಾರ ಅಷ್ಟೂ ದಿನ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಒಂದೇ ದಿನ 800 ರೂಪಾಯಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ದರ 10 ಗ್ರಾಂಗೆ 47,100 ರೂಪಾಯಿ ಆಗಿದೆ. ಬೆಳ್ಳಿ ದರದ ವಿಚಾರಕ್ಕೆ ಬರುವುದಾದರೆ ಕಳೆದವಾರ ಕೆಜಿ ಬೆಳ್ಳಿ ದರ ಸತತ ಇಳಿಕೆ ಕಂಡಿದೆ. ಈ ಮೂಲಕ 62, 800 ರೂಪಾಯಿ ಆಗಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ಮತ್ತೆ ಏರಿಕೆ ಕಾಣಲಿದೆ ಚಿನ್ನ?:
ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

Comments are closed.