ಕರ್ನಾಟಕ

ಕೊರೋನಾ, ಡ್ರಗ್ಸ್, ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಮೂಡಿಸಿದ ಕೊಡಗು ಪೊಲೀಸರು…!

Pinterest LinkedIn Tumblr

ಮಡಿಕೇರಿ: ಸಾಂಕ್ರಾಮಿಕ ಪಿಡುಗಾಗುತ್ತಿರುವ ಕೋವಿಡ್-19 ಸೋಂಕಿನ ವಿರುದ್ಧ, ಮಾದಕ ದ್ರವ್ಯ ಸೇವನೆಯಂತಹ ದುಶ್ಚಟಗಳ ವಿರುದ್ಧ ಹಾಗು ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಬಲಿಯಾಗದಂತೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ವಾಹನ ಜಾಥಾವನ್ನು ಪೊಲೀಸ್ ಇಲಾಖಾ ವತಿಯಿಂದ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಅವರ ನೇತೃತ್ವದಲ್ಲಿ ಮಡಿಕೇರಿ ನಗರದಲ್ಲಿ ನಡೆಯಿತು.

ಕೋವಿಡ್-19 ಸೋಂಕಿನ ವಿರುದ್ಧ ತೆಗೆದುಕೊಳ್ಳಬೇಕಾಗ ಮುನ್ನೆಚ್ಚರಿಕೆ ಬಗ್ಗೆ, ಮಾದಕ ವಸ್ತು ಸೇವನೆಯ ಬಗ್ಗೆ ದುಷ್ಪರಿಣಾಮಗಳ ಬಗ್ಗೆ ಮತ್ತು ಸೈಬರ್ ಅಪರಾಧಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವ ಘೋಷಣಾ ಪತ್ರಗಳನ್ನು ಪೊಲೀಸ್ ಇಲಾಖೆಯ ವಿವಿಧ ವಾಹನಗಳಿಗೆ ಅಳವಡಿಸಿ ಜಿಲ್ಲಾ ಪೊಲೀಸ್ ಕಛೇರಿಯಿಂದ ಪ್ರಾರಂಭ ಗೊಂಡು ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಜಾಥಾವು ನಗರದ ಕೋವಿಡ್ ಆಸ್ಪತ್ರೆ ಬಳಿ ತೆರಳಿ ಕೊರೋನಾ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಇಲಾಖೆಯ ಸಿಬ್ಬಂದಿಗಳಿಗೆ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆಯನ್ನು ಸಲ್ಲಿಸಲಾಯಿತು.

ಜನ ಜಾಗೃತಿ ಜಾಥಾಕ್ಕೆ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್ ರವರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಾಗು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

Comments are closed.