ಕರ್ನಾಟಕ

Breaking News: ಸಿಬಿಐ ಕಸ್ಟಡಿ ಎದುರಿಸಬೇಕಿದ್ದ ರೋಷನ್ ಬೇಗ್ ಆಸ್ಪತ್ರೆಗೆ ಶಿಫ್ಟ್..!

Pinterest LinkedIn Tumblr

ಬೆಂಗಳೂರು: ಐಎಂಎ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಷನ್​ ಬೇಗ್ ಅವರಿಗೆ ಸಿಬಿಐ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಬೇಗ್ ದಾಖಲಾಗಿದ್ದಾರೆ. ಕಳೆದ ಮೂರು ದಿನಗಳಿಂದ ಜೈಲಿನಲ್ಲಿದ್ದ ರೋಷನ್​ ಬೇಗ್​ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದು ನಿನ್ನೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ಅವರನ್ನುಮೂರು ದಿನ ಸಿಬಿಐ ವಿಚಾರಣೆಗೆ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದರು.

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸಿಂಗಲ್ ಸೆಲ್​ನಲ್ಲಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಕ್ಸಿಜನ್ ಬೆಡ್​ಗೆ ಶಿಫ್ಟ್ ಮಾಡಲಾಗಿದೆ. ಇಂದು ಮುಂಜಾನೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಅವರನ್ನು ಜೈಲು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಜಯದೇವ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಬೇಗ್ ಅವರು ಸಕ್ಕರೆ ಕಾಯಿಲೆ, ಬಿಪಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಬಳಿಕ ಸಿಬಿಐ ಕಸ್ಟಡಿಗೆ ಪಡೆಯಲಿದೆ ಎಂದು ತಿಳಿದುಬಂದಿದೆ.

Comments are closed.