ಬೆಂಗಳೂರು: ಡಿಸೆಂಬರ್‌ನಲ್ಲಿ 2 ಹಂತದಲ್ಲಿ ಗ್ರಾಮಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಡಿ.30 ರಂದು ಮತ ಎಣಿಕೆ ನಡೆಯಲಿದೆ.
ರಾಜ್ಯ ಚುನಾವಣಾ ಆಯೋಗವು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಒಟ್ಟು 5,762 ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ. ಡಿ.22 ರಂದು ಮೊದಲ ಹಂತದ ಚುನಾವಣೆ ನಡೆದರೆ ಡಿ. 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.
ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ.
ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಮತಎಣಿಕೆ ನಡೆಯಲಿದೆ. ಎರಡು ಹಂತದ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಕೋವಿಡ್ ಪಾಸಿಟಿವ್ ಇರುವ ರೋಗಿಗಳಿಗೆ ಮತ ಹಾಕಲು ಕೊನೆಯ ಒಂದು ಗಂಟೆಗೆ ಅವಕಾಶ ಕೊಡುತ್ತೇವೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಜಿಲ್ಲೆಯ ಅರ್ಧ ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಯಲಿದೆ. ಉಳಿದ ತಾಲೂಕುಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರತಿ ಜಿಲ್ಲೆಗಳಲ್ಲೂ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಡಿಸೆಂಬರ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಯಂತ್ರಗಳ ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತಿ ಜಾರಿಯಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.