ಕರ್ನಾಟಕ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ: ಬಿಗಿ ಬಂದೋಬಸ್ತ್

Pinterest LinkedIn Tumblr


ಶಿವಮೊಗ್ಗ: ಬಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ನಂತರ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಲ್ಲೆ ಘಟನೆ ಬಗ್ಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಲಾಗಿದೆ.

ಶಿವಮೊಗ್ಗದ ಗಾಂಧಿ ಬಜಾರ್ ಸೇರಿ ಕೆಲವೆಡೆ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ತಹಶೀಲ್ದಾರ್ ನಾಗರಾಜ್ ಅವರು ಶನಿವಾರ ರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಐಜಿಪಿ ಎಸ್. ರವಿ ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ವದಂತಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

Comments are closed.