ಕರ್ನಾಟಕ

ನಟಿ ರಾಗಿಣಿಗೆ ಬಿಗ್ ಶಾಕ್: ಜಾಮೀನು ಅರ್ಜಿ ಜನವರಿಗೆ ಮುಂದೂಡಿಕೆ- ತುಪ್ಪದ ಬೆಡಗಿಗೆ ಹೊಸವರ್ಷವೂ ಜೈಲಲ್ಲೇ..!

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧಿಸಿದಂತೆ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.

ನ್ಯಾಯವಾದಿಗಳ ಮೂಲಕ ನಟಿ ರಾಗಿಣಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು ಬಳಿಕ ನಟಿ ರಾಗಿಣಿ ಪರ ವಕೀಲಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ಇಂದು ನ್ಯಾಯಪೀಠವು ಜನವರಿಗೆ ಮುಂದೂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಜೈಲು ಸೇರಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗಾಗಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಗೆ ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ಜನವರಿಗೆ ಮುಂದೂಡಿಕೆ ಮಾಡಿದೆ.

ಈ ಮೂಲಕ ಈ ವರ್ಷ ನಟಿ ರಾಗಿಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯವೇ ಇಲ್ಲದಾಗಿದ್ದು ಹೊಸ ವರ್ಷವನ್ನು ಜೈಲಿನಲ್ಲಿಯೇ ಆಚರಿಸುವಂತೆ ಆಗಿದೆ.

Comments are closed.